ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ತುಟ್ಟಿ ಭತ್ಯೆ ಹೆಚ್ಚಳ…

98
firstsuddi

ಬೆಂಗಳೂರು : ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ(ಡಿಎ) ಹೆಚ್ಚಳಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶೇಕಡಾ 11.25 ರಿಂದ 21.50 ಕ್ಕೆ ಹೆಚ್ಚಳ ಮಾಡಲಾಗಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ.

ತಾವು ರಾಜೀನಾಮೆ ಕೊಡುವ ಮುನ್ನವೇ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಲು ಸಿಎಂ ಯಡಿಯೂರಪ್ಪ ಹೇಳಿದ್ದರು. ಹೀಗಾಗಿ ಇಂದು ಆದೇಶಿಸಲಾಗಿದೆ. ಒಟ್ಟಾರೆ ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿಹಿ ಸುದ್ದಿ ನೀಡಿದ್ದಾರೆ.