ಸರ್ಕಾರಿ ಬಸ್-ಬೈಕ್ ನಡುವೆ ಡಿಕ್ಕಿ : ಬೈಕ್ ಸವಾರರಿಬ್ಬರು ಸಾವು…

153
Firstsuddi

ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲ್ಲೂಕಿನ ಲಾಳಸಂಗಿ ಗ್ರಾಮದ ಬಳಿ ನಡೆದಿದೆ.

ಖೇಡಗಿ ಗ್ರಾಮದ ಕೆವಿಜಿ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ ಹಾಗೂ ಕ್ಯಾಷಿಯರ್ ಚೈತನ್ಯ ಕುಮಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇಂಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.