ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ- 6 ಮಂದಿ ಸಾವು…

70
firstsuddi

ಚೆನೈ: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಆರು ಜನ ಸಾವನ್ನಪ್ಪಿದ ಘಟನೆ ತಿರುವಣ್ಣಾಮಲೈನ ಅಂಧನೂರ್ ಬೈಪಾಸ್ ಬಳಿ ನಡೆದಿದೆ.

10 ಜನರಿದ್ದ ಟಾಟಾ ಸುಮೋ ತಿರುವಣ್ಣಾಮಲೈನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಸೆಂಗಂ ಬಳಿ ಸರ್ಕಾರಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಬಸ್ಸಿನಲ್ಲಿದ್ದ ಸುಮಾರು 10 ಪ್ರಯಾಣಿಕರಿಗೂ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ಸೆಂಗಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಕುರಿತು ಸೆಂಗಂ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನೂ ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.