ಸರ್ಧಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ…

161
firstsuddi

ನವದೆಹಲಿ : ಸರ್ಧಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನವನ್ನು ಕಳೆದ 5ವರ್ಷದಿಂದ ದೇಶಾಧ್ಯಂತ “ಏಕತಾ ದಿನ” ಎಂದು ಆಚರಿಸಿಕೊಂಡು ಬರುತ್ತಿದ್ದು, ಈ ಹಿನ್ನೆಲೆ, ಇಂದು ಸರ್ಧಾರ್ ವಲ್ಲಭಭಾಯ್ ಪಟೇಲ್ ಅವರ 144ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‍ನ ಕೆವಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರ ರಾಜಧಾನಿಯಲ್ಲಿರುವ ಸರ್ಧಾರ್ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ್ದು, ಏಕತಾ ಓಟಕ್ಕೆ ಚಾಲನೆ ನೀಡಿದರು.