ಸಲ್ಮಾನ್‍ ಖಾನ್‍ಗೆ ಬಂತು ಮತ್ತೊಂದು ಕೊಲೆ ಬೆದರಿಕೆ ಕರೆ!

55
firstsuddi

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ. ಇದೀಗ ಮತ್ತೆ ಸಲ್ಲುಗೆ ಕೊಲೆ ಬೆದರಿಕೆ ಕರೆ ಬಂದಿದೆ.

ಬೆದರಿಕೆ ಹಾಕಿರುವ ವ್ಯಕ್ತಿ ತನ್ನನ್ನು ರಾಜಸ್ಥಾನದ ಜೋಧ್‍ಪುರದ ರಾಕಿಭಾಯ್ ಎಂದು ಪರಿಚಯಿಸಿಕೊಂಡಿದ್ದಾನೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಮುಂಬೈ ಪೊಲೀಸರ ಕಂಟ್ರೋಲ್ ರೂಂಗೆ ಕರೆ ಬಂದಿದೆ. ಏಪ್ರಿಲ್ 30ರಂದು ಸಲ್ಲುನ ಹತ್ಯೆ ಮಾಡಲಾಗುವುದು ಎಂದು ಕರೆಯಲ್ಲಿ ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮಾರ್ಚ್ ತಿಂಗಳಲ್ಲಿ ಸಲ್ಮಾನ್ ಖಾನ್ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಬಂದಿತ್ತು. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು. ನಟನ ಆಪ್ತರೊಬ್ಬರಿಗೆ ಕಳುಹಿಸಲಾದ ಇ-ಮೇಲ್‍ನಲ್ಲಿ ಗ್ಯಾಂಗ್‍ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಇತ್ತೀಚಿನ ಸಂದರ್ಶನದಲ್ಲಿ ಉಲ್ಲೇಖಿಸಿ “ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿಯಾಗಿದೆ” ಎಂದು ಸಂದೇಶ ಕಳುಹಿಸಿದ್ದ. ಈ ಕುರಿತು ಬಾಂದ್ರಾ ಮತ್ತು ರಾಜಸ್ಥಾನ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.

ಸಲ್ಮಾನ್ ಗೆ ನಿರಂತರವಾಗಿ ಕೊಲೆ ಬೆದರಿಕೆ ಕರೆ ಹೆಚ್ಚಾಗುತ್ತಿರುವ ಹಿನ್ನಲೆ ಬುಲೆಟ್ ಪ್ರೂಫ್ ಕಾರ್ ಖರೀದಿಸಿದ್ದಾರೆ ಎನ್ನುವ ಮಾಹಿತಿ ಇದೆ.