ಸಲ್ಮಾನ್ ಖಾನ್ ಕೊಲ್ಲುವುದೇ ನನ್ನ ಅಂತಿಮ ಗುರಿ : ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಸ್ಫೋಟಕ ಹೇಳಿಕೆ…

15
firstsuddi

ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಕೋರ್ಟ್ ನಲ್ಲಿ ಕೇಸ್ ಎದುರಿಸುತ್ತಿದ್ದರೆ, ಮತ್ತೊಂದೆಡೆ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾನೆ.

ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು ಬಿಷ್ಣೋಯ್ ಮತ್ತು ಟೀಮ್ ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾರೆ. ಇದೀಗ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ ಎಂದಿದ್ದಾನೆ.

ಯಾವುದೋ ಜಾಗದಲ್ಲಿ ನಿಂತು ಕ್ಷಮೆ ಕೇಳಿದರೆ ನಾವು ಒಪ್ಪುವುದಿಲ್ಲ. ಬಿಕಾನೇರ್ ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಎಂದು ಲಾರೆನ್ಸ್ ಮಾತನಾಡಿದ್ದಾನೆ. ಸಲ್ಮಾನ್ ಖಾನ್ ಗೆ ತುಂಬಾ ಅಹಂ ಇದೆ. ಆ ನಟನಿಗೆ ಅಂಗರಕ್ಷಕರು ಇಲ್ಲದಿದ್ದರೆ ಇಷ್ಟೊತ್ತಿಗೆ ಪ್ರಾಣ ಹೋಗಿರುತ್ತಿತ್ತು ಎಂದಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ.