ಬೆಂಗಳೂರು : ಬಾಂಗ್ಲಾದೇಶದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕೃತ್ಯ ಅಮಾನುಷ ಘಟನೆಯಾಗಿದ್ದು, ಸೂಕ್ತ ಕಾನೂನು ಕ್ರಮಕ್ಕೆ ಸೂಚಿಸುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪನವರು ತಿಳಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಅಷ್ಟು ಮಾಹಿತಿ ಇಲ್ಲ. ಆದರೆ, ಇದೊಂದು ಅಮಾನುಷ ಕೃತ್ಯ, ಯಾರು ಕೂಡ ಸಹಿಸಲು ಸಾಧ್ಯವಿಲ್ಲ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಸರಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದರು.










