ಸಾರಿಗೆ ನೌಕರರಿಗೆ ಬಿಗ್ ಶಾಕ್ : ಮಾರ್ಚ್ ತಿಂಗಳ ವೇತನ ತಡೆಯಲು ಸರ್ಕಾರ ನಿರ್ಧಾರ..!

114
firstsuddi

ಬೆಂಗಳೂರು : ಸಾರಿಗೆ ನೌಕರರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ನೌಕರರಿಗೆ ಸರ್ಕಾರ ಮಾರ್ಚ್ ತಿಂಗಳ ವೇತನವನ್ನು ತಡೆಹಿಡಿಯಲು ನಿರ್ಧರಿಸಿದೆ. ಸಾರಿಗೆ ನೌಕರರಿಗೆ ಮುಷ್ಕರ ಕೈ ಬಿಡುವಂತೆ ಸರ್ಕಾರ ಮನವಿ ಮಾಡಿದರೂ ನೌಕರರು ಮುಷ್ಕರದಲ್ಲಿ ಪಾಲ್ಗೊಂಡ ಹಿನ್ನಲೆ ಮಾರ್ಚ್ ತಿಂಗಳ ಸಂಬಳ ತಡೆಹಿಡಿಯಲು ಸಾರಿಗೆ ನಿಗಮಗಳು ಮುಂದಾಗಿವೆ. ತಿಂಗಳ 10 ನೇ ತಾರೀಖಿನ ಒಳಗೆ ವೇತನ ನೀಡುತ್ತಿದ್ದ ನಿಗಮಗಳು ಈ ಬಾರಿ ಮುಷ್ಕರ ಕೈಬಿಡುವವರೆಗೆ ಸಂಬಳವಿಲ್ಲ ಎಂದು ಸರ್ಕಾರ ನಿರ್ಧರಿಸಿದೆ.