ಸಾಲಗಾರರಿಗೆ ಕೊಂಚ ರಿಲೀಫ್-ಆರ್ ಬಿಐ ನಿಂದ 3ತಿಂಗಳ ಸಾಲದ ಮೇಲಿನ ಇಎಂಐ ಮುಂದೂಡಿಕೆ…

305
firstsuddi

ನವದೆಹಲಿ : ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿರುವ ಹಿನ್ನೆಲೆ, ಆರ್ ಬಿಐ ಸಾಲಗಾರರಿಗೆ ಸ್ವಲ್ಪ ರಿಲೀಫ್ ನೀಡಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು, ರಾಷ್ಟ್ರೀಕೃತ, ವಾಣಿಜ್ಯ, ಸಹಕಾರಿ, ಗ್ರಾಮೀಣ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕ್‍ಗಳ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದ್ದು, ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್ ಹಾಗೂ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಹಾಗೂ ಎಲ್ಲಾ ಬ್ಯಾಂಕ್‍ಗಳಲ್ಲಿ ಪಡೆದಿರುವ ಸಾಲದ ಇಎಂಐನ್ನು ಜೂನ್ ವತರೆಗೂ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದರು.