ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ…

173
firstsuddi

ಮಂಡ್ಯ : ಸಾಲಬಾಧೆ ತಾಳಲಾರದೆ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಎಂ ದೊಡ್ಡಿ ಸಮೀಪದ ಮೆಳ್ಳಹಳ್ಳಿಯಲ್ಲಿ ನಡೆದಿದೆ. ನಾಗರಾಜು(28), ಮಂಜುಳ(24) ಮೃತ ದುರ್ಧೈವಿಗಳು. ಇವರಿಗೆ ಸುಮಾರು 1.5 ಲಕ್ಷ ರೂ ಸಾಲ ಇತ್ತು ಎಂದು ತಿಳಿದು ಬಂದಿದ್ದು,  ಸಾಲಗಾರರು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.