ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು…

75
firstsuddi

ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.

ರಾಹುಲ್ ಗಾಂಧಿ ಹೇಳಿಕೆಯಿಂದ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬಾಳಾಸಾಹೆಬಂಚಿ ಶಿವಸೇನಾ ನಾಯಕಿ ವಂದನಾ ಡೋಂಗ್ರೆ ಥಾಣೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಹುಲ್ ವಿರುದ್ಧ ಐಪಿಸಿ ಸೆಕ್ಷನ್ 500, 501ರ ಅಡಿಯಲ್ಲಿ ನಾನ್-ಕಾಗ್ನಿಜಬಲ್ (ಓಅಖ) ಅಪರಾಧದ ಪ್ರಕರಣವನ್ನು ದಾಖಲಿಸಲಾಗಿದೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರಿಗೆ ಕ್ಷಮೆಯಾಚನೆಯ ಪತ್ರ ಬರೆದು ಸಾವರ್ಕರ್ ಅವರು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರಂತಹ ನಾಯಕರಿಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರನ್ನು ದೂಷಿಸುವ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ವಂದನಾ ಡೋಂಗ್ರೆ ಹೇಳಿದ್ದಾರೆ.