ಸಾವಿನಲ್ಲೂ ಸಾರ್ಥಕತೆ ಮೆರೆದ ಅಪ್ಪು..ನೇತ್ರದಾನ ಮಾಡಲು ಕುಟುಂಬ ನಿರ್ಧಾರ…

81
firstsuddi

ಬೆಂಗಳೂರು : ಕನ್ನಡದ ಖ್ಯಾತ ಪ್ರತಿಭಾವಂತ ನಟ, ಡೊಡ್ಡ ಮನೆ ಮಗ ಪುನೀತ್ ರಾಜ್ಕುಮಾರ್(46) ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದು, ಸಾವನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕಣ್ಣುಗಳನ್ನು ದಾನ ಮಾಡಲು ಕುಟುಂಬ ನಿರ್ಧರಿಸಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.

ಪುನೀತ್ ಅವರು ಪತ್ನಿ ಅಶ್ವಿನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು, ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.