“ಸಾಹೋ” ಚಿತ್ರದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಅಭಿಮಾನಿ ಸಾವು…

301
firstsuddi

ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಅಭಿನಯದ “ಸಾಹೋ” ಚಿತ್ರವು ಆ.30ರಂದು ಬಿಡುಗಡೆಯಾಗಲಿದ್ದು, ಈ ಹಿನ್ನೆಲೆ ಅಭಿಮಾನಿಯೊಬ್ಬರು ಸ್ಥಳೀಯ ಚಿತ್ರಮಂದಿರದಲ್ಲಿ ಬ್ಯಾನರ್ ಕಟ್ಟುವ ವೇಳೆ ವಿದ್ಯತ್ ಶಾಕ್‍ಗೆ ಒಳಗಾಗಿ ಮೃತಪಟ್ಟಿದ್ದಾರೆ. ಅಭಿಮಾನಿಯೊಬ್ಬರು ಪ್ರಭಾಸ್ ಅಭಿನಯದ ಸಾಹೋ ಚಿತ್ರ ಬಿಡುಗಡೆಯಾಗುತ್ತಿರುವ ಸಂಭ್ರಮದಲ್ಲಿ ಚಿತ್ರಮಂದಿರದ ಕಟ್ಟಡದ ಮೇಲೇರಿ ಚಿತ್ರದ ಬ್ಯಾನರ್ ಕಟ್ಟುವ ವೇಳೆ ಪಕ್ಕದಲ್ಲಿ ಹಾದು ಹೋಗಿದ್ದ ವಿದ್ಯತ್ ತಂತಿ ಸ್ಪರ್ಶಿಸಿದ ಪರಿಣಾಮ ಕಟ್ಟಡದ ಮೇಲಿಂದ ಕೆಳಗೆ ಬಿದ್ದಿದ್ದಾರೆ. ಮೇಲಿಂದ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಚಿತ್ರಮಂದಿರದ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.