ಸಿಂದಗಿ ಉಪಚುನಾವಣೆ ಫಲಿತಾಂಶ – ಬಿಜೆಪಿಗೆ ಭರ್ಜರಿ ಜಯ…

68
firstsuddi

ವಿಜಯಪುರ : ಸಿಂದಗಿ ಕ್ಷೇತ್ರದ ಉಪ ಚುನಾವಣೆಯ 22 ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರು, 31,185 ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.

ಬಿಜೆಪಿ ಒಟ್ಟು 93,380 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ 62,292 ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ ಮತ್ತು ಜೆಡಿಎಸ್ ಕೇವಲ 4,321 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಅಕ್ಟೋಬರ್ 30 ರಂದು ಉಪಚುನಾವಣೆ ನಡೆದಿದ್ದು, ಶೇ.69.47ರಷ್ಟು ಮತದಾನವಾಗಿತ್ತು.

ಇನ್ನೂ ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್ ವೈ, ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ ಎಂದಿದ್ದಾರೆ.