ಸಿಎಂ ಠಾಕ್ರೆ ಮನೆ ಮುಂದೆ ಹನುಮಾನ್ ಚಾಲೀಸಾ ಪಠಿಸುವ ಸವಾಲು: ರಾಣಾ ದಂಪತಿಗೆ ಜಾಮೀನು…

60
firstsuddi

ಮುಂಬೈ : ಸಂಸದೆ ನವನೀತ್ ಕೌರ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಅವರಿಗೆ ಮುಂಬೈ ಸೆಷನ್ಸ್ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನೀವೂ ಹನುಮಾನ್ ಚಾಲೀಸಾ ಪಠಿಸಬೇಕು. ಇಲ್ಲ ನಾವೇ ನಿಮ್ಮ ಮನೆ ಮುಂದೆ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆಂದು ನವನೀತ್-ರಾಣಾ ದಂಪತಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಅವರನ್ನು ಮುಂಬೈ ಪೊಲೀಸರು ಏ.23ರಂದು ಬಂಧಿಸಿದ್ದರು.