ಸಿಎಂ ಬದಲಾವಣೆ ಬಗ್ಗೆ ನಮ್ಮಲ್ಲಿ ಯಾವುದೇ ಚರ್ಚೆ ಆಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್.

40

ಮೈಸೂರು: ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಚರ್ಚೆ ಆಗಿಲ್ಲ. ಹೀಗಿದ್ದರೂ ಬಿಜೆಪಿ ಹಾಗೂ ಜೆಡಿಎಸ್‍ನವರು ಈ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಬದಲಾವಣೆ ಆಗುತ್ತದೆ ಎಂದು ಬಿಜೆಪಿ, ಜೆಡಿಎಸ್‍ನವರು ಹೇಳುತ್ತಿದ್ದಾರೆಯೇ ಹೊರತು ಈ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದರು. ಕೋವಿಡ್ ಹಗರಣದ ತನಿಖೆ ನಡೆಯುತ್ತಿದೆ. ಔಷಧ ಖರೀದಿಯಲ್ಲಿ ಕೋಟಿಗಟ್ಟಲೆ ಅಕ್ರಮ ನಡೆದಿರುವ ಬಗ್ಗೆ ತನಿಖೆ ಆಗುತ್ತಿದೆ. ವರದಿ ಬಂದ ಬಳಿಕ ಕ್ರಮ ಆಗಲಿದೆ” ಎಂದು ಇದೇ ವೇಳೆ ತಿಳಿಸಿದರು. ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟರೆ ಅವರಿಗೆ ನೋಟಿಸ್ ಕೊಟ್ಟು ಕರೆಸುತ್ತಾರೆ. ಸಚಿವ ಜಮೀರ್ ಅವರ ವಿಚಾರವನ್ನು ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದರು.