ಸಿಎಂ ಬದಲಾವಣೆ ವಿಚಾರ – ಭವಿಷ್ಯ ನುಡಿದ್ರು ಕೋಡಿಮಠದ ಶ್ರೀಗಳು!

119
firstsuddi

ಕಾರವಾರ : ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಶಿರಸಿ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿರುವ ಭೂದೇವಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ ಎಂದು ಹೇಳಿದ್ದಾರೆ.

ನವೆಂಬರ್ ನಿಂದ ಸಂಕ್ರಾಂತಿ ನಡುವೆ ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ. ಆಗಸ್ಟ್ ಮೂರನೇ ವಾರದಿಂದ ಕೋವಿಡ್ ಹಾವಳಿ ಹೆಚ್ಚಾಗಲಿದೆ. ರೋಗದಿಂದ ಜನರು ಸಾಯುವುದಿಲ್ಲ. ರೋಗದ ಭಯದಿಂದಲೇ ಸಾಯುವವರ ಸಂಖ್ಯೆ ಹೆಚ್ಚಾಗಲಿದೆ. ಜನ ಧೈರ್ಯ ಕಳೆದುಕೊಳ್ಳಬಾರದು. ಮುಂದೆ ಹೆಚ್ಚು ಮಳೆಯಾಗಲಿದ್ದು, ಜಲಪ್ರಳಯ ಉಂಟಾಗಲಿದೆ ಎಂದು ಇದೇ ವೇಳೆ ಮತ್ತೊಂದು ಭವಿಷ್ಯ ನುಡಿದಿದ್ದಾರೆ.