ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಕುಟುಂಬ ಹಾಗೂ ಆಪ್ತರ ವಿರುದ್ಧ ಭ್ರಷ್ಟಚಾರದ ಆರೋಪದಡಿ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾಗೊಂಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಆಪ್ತರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಾಂ ಖಾಸಗಿ ದೂರು ಸಲ್ಲಿಸಿದ್ದರು. ಸಿಎಂ ಬಿಎಸ್‍ವೈ ಸೇರಿ 9 ಮಂದಿ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಆದರೆ ಅದರ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಅನುಮತಿ ಸಿಗದ ಕಾರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಲ್ಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.










