ಸಿಎಂ ಬೆಂಗವಾಲು ಪಡೆ ವಾಹನ ಅಪಘಾತ…

436
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಾವಲು ಪಡೆ ವಾಹನ ಅಪಘಾತಕ್ಕೀಡಾಗಿರುವ ಘಟನೆ ಯಶವಂತಪುರ ಮೇಲ್ಸೇತುವೆ ಬಳಿ ನಡೆದಿದೆ. ಜನವರಿ 2ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸುತ್ತಿರುವ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ಯಶವಂತಪುರದ ಬಳಿ ಅತಿ ವೇಗವಾಗಿ ಬಂದ  ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಕ್ಯಾಂಟರ್ ಹಾಗೂ ಆಟೋಗೆ ಗುದ್ದಿದ್ದು, ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕ ವಿನಯ್ ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.