ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವ ಶರ್ಮಾ ಅವರು ಭೇಟಿ ಮಾಡಿದ್ದಾರೆ.
ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ಗೆ ಆಗಮಿಸಿದ ಹಿಮಂತ ಬಿಸ್ವ ಶರ್ಮಾ ಅವರು ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂಬಂಧ ಟ್ವೀಟ್ ಮಾಡಿರುವ ಹಿಮಂತ ಬಿಸ್ವ ಶರ್ಮಾ, ನಾವು ರಾಷ್ಟ್ರ ಮತ್ತು ರಾಜ್ಯಗಳಿಗೆ ಸಂಬಂಧಿಸಿದಂತೆ ಪರಸ್ಪರ ಹಿತಾಸಕ್ತಿಯ ವಿಷಯಗಳನ್ನು ಚರ್ಚಿಸಿದ್ದೇವೆ. ಜೊತೆಗೆ ಅಸ್ಸಾಂ ಮತ್ತು ಕರ್ನಾಟಕದ ನಡುವಿನ ಸಹಯೋಗದ ವ್ಯಾಪ್ತಿಯ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
Glad to have met Hon'ble Chief Minister of Karnataka Shri @BSBommai in Bengaluru today.
We discussed a range of issues of mutual interest with respect to nation & the states. Also deliberated on scope of collaboration between Assam & Karnataka.@CMOfficeAssam @CMofKarnataka pic.twitter.com/bT5JDkFOvT
— Himanta Biswa Sarma (@himantabiswa) May 17, 2022










