ಸಿಎಂ ಸಿದ್ದರಾಮಯ್ಯರನ್ನೇ ಗಡಿಪಾರು ಮಾಡಲಿ; ಕಾಂಗ್ರೆಸ್ ದೂರಿಗೆ ಸ್ನೇಹಮಯಿ ಕೃಷ್ಣ ತಿರುಗೇಟು.

22

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಇಂದು ಮತ್ತೊಂದು ದೂರು ದಾಖಲಿಸಿದೆ. ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಇಂದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ದೂರಿಗೆ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ ಅವರು, ಸಿಎಂ ಸಿದ್ದರಾಮಯ್ಯ ಅವರನ್ನೇ ಗಡಿಪಾರು ಮಾಡಬೇಕು ಎಂದು ತಿರುಗೇಟು ನೀಡಿದ್ದಾರೆ. ನಾನು ಕಾನೂನುಬದ್ಧವಾದ ಹೋರಾಟ ನಡೆಸುತ್ತಿದ್ದೇನೆ. ಸಮಾಜಕ್ಕೆ ನ್ಯಾಯ ಕೊಡಿಸಲು ನಾನು ಹೋರಾಡುತ್ತಿದ್ದೇನೆ. ನನ್ನ ಗಡಿಪಾರು ಮಾಡಲು ಅವಕಾಶವಿಲ್ಲ. ಸಿದ್ದರಾಮಯ್ಯರನ್ನ ಗಡಿಪಾರು ಮಾಡಲು ಸಾಕಷ್ಟು ಅವಕಾಶಗಳಿವೆ. ಸುಳ್ಳು ಭಾಷಣ ಮಾಡಿ ರಾಜ್ಯದ ಜನರನ್ನ ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದರು.