ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ತಿರಥ್ ಸಿಂಗ್ ರಾವತ್.

98
firstsuddi

ಡೆಹರಾಡೂನ್ : ಉತ್ತರಾಖಂಡ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ತಿರಥ್ ಸಿಂಗ್ ರಾವತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ತಿರಥ್ ಸಿಂಗ್ ರಾವತ್ ಅವರು, ಸಾಂವಿಧಾನಿಕ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ. ಅಲ್ಲದೇ ಕೋವಿಡ್ ಎರಡನೇ ಅಲೆಯಿಂದಾಗಿ ಬೈ ಎಲೆಕ್ಷನ್ ನಡೆಯದೇ ಇರುವ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಇದೀಗ ಮತ್ತೆ ಉತ್ತರಾಖಂಡದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಬೇಕಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷವು ಸಭೆ ಕರೆದಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇತ್ತ ಹೈಕಮಾಂಡ್ ಶಾಸಕರಾದ ಸತ್ಪಲ್ ಮಹಾರಾಜ್ ಮತ್ತು ದಾನ್ ಸಿಂಗ್ ರಾವತ್ ಮುಖ್ಯಮಂತ್ರಿ ಹುದ್ದೆಯ ಮುಂಚೂಣಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ತಿರಥ್ ಸಿಂಗ್ ರಾವತ್ ಅವರು ಉತ್ತರಾಖಂಡದ ಮುಖ್ಯಮಂತ್ರಿಯಾಗಿ 2021ರ ಮಾರ್ಚ್ ತಿಂಗಳಲ್ಲಿ ಅಧಿಕಾರವಹಿಸಿಕೊಂಡಿದ್ದರು. ಒಂದೇ ವರ್ಷದಲ್ಲಿ ಉತ್ತರಾಖಂಡ ಮೂವರು ಸಿಎಂ ಕಾಣ್ತಿರೋದು ಇದೇ ಮೊದಲು ಎನ್ನಲಾಗುತ್ತಿದೆ.