ಸಿಎಸ್​ಕೆ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಧೋನಿ.

91
firstsuddi

ಹೈದರಾಬಾದ್ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ಅವರು ರಾಜೀನಾಮೆ ನೀಡಿದ್ದು, ಈ ಸ್ಥಾನಕ್ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸಿಎಸ್‍ಕೆ ತಮ್ಮ ಅಧಿಕೃತ ಟ್ವಟ್ಟರ್ ಖಾತೆಯಲ್ಲಿ ತಿಳಿಸಿದೆ. 

ಮಾರ್ಚ್ 26ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಗೊಳ್ಳಲಿದ್ದು, ಮೊದಲ ಪಂದ್ಯದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ  ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಇದಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಿಂದ ಕೆಳಗಿಳಿದಿದ್ದು, ಆ ಜವಾಬ್ದಾರಿ ಆಲ್​ರೌಂಡರ್ ರವೀಂದ್ರ ಜಡೇಜಾಗೆ ವಹಿಸಲಾಗಿದೆ.