ಸಿಡಿ ಪ್ರಕರಣ : ಬೌರಿಂಗ್ ಆಸ್ಪತ್ರೆಯಲ್ಲಿ ಸಿಡಿ ಲೇಡಿಗೆ ವೈದ್ಯಕೀಯ ಪರೀಕ್ಷೆ…

131
firstsuddi

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಬೌರಿಂಗ್ ಆಸ್ಪತ್ರೆಗೆ ಎಸ್ಐಟಿ ತನಿಖಾಧಿಕಾರಿಗಳು ಕರೆ ತಂದಿದ್ದಾರೆ. ತನಿಖಾಧಿಕಾರಿ ಕವಿತಾ ಅವರ ನೇತೃತ್ವದಲ್ಲಿ ಬೌರಿಂಗ್ ಆಸ್ಪತ್ರೆಗೆ ಆಗಮಿಸಿದ್ದು, ಮೆಡಿಕಲ್ ಟೆಸ್ಟ್ ಬಳಿಕ ಎಸ್ಐಟಿ ಅಧಿಕಾರಿಗಳು ನೇರವಾಗಿ ಆಡುಗೋಡಿಗೆ ವಿಚಾರಣಾ ಕೇಂದ್ರಕ್ಕೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.