ಸಿಡಿ ಪ್ರಕರಣ – ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿದ ಎಸ್‍ಐಟಿ.

70
firstsuddi

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚೀಟ್ ನೀಡಿದೆ. ಈ ಮೂಲಕ ಪ್ರಕರಣದ ಆರೋಪಿಯಾಗಿದ್ದ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ನಿನ್ನೆ ಹೈಕೋರ್ಟ್ ಎಸ್‍ಐಟಿಗೆ ತನಿಖಾ ವರದಿ ಸಲ್ಲಿಸಲು ಅನುಮತಿ ನೀಡಿತ್ತು. ಈ ಹಿನ್ನಲೆ ಆತ್ಯಾಚಾರ ಎಸಗಿರುವುದಾಗಿ ಯುವತಿ ನೀಡಿದ್ದ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚಿಟ್ ನೀಡಿದ್ದು, ಈ ಸಂಬಂಧ ಇಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.

ಯುವತಿ ಕೊಟ್ಟ ದೂರಿನಲ್ಲಿ ಯಾವುದೇ ಹುರುಳಿಲ್ಲ, ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ತನಿಖಾಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ವಿಡಿಯೋ ಬಿಡುಗಡೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಎಸ್ಐಟಿ ಕ್ಲೀನ್ ಚಿಟ್ ನೀಡಿರುವ ಹಿನ್ನಲೆ ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರಿಕೊಳ್ಳುವ ಸಾಧ್ಯತೆ ಇದೆ.