ಸಿಡಿ ಪ್ರಕರಣ : 5ನೇ ದಿನದ ವಿಚಾರಣೆ ಅಂತ್ಯ ..ಬಿಗಿ ಭದ್ರತೆಯಲ್ಲಿ ಗೌಪ್ಯ ಸ್ಥಳಕ್ಕೆ ಸಿಡಿ ಲೇಡಿ..!

113
firstsuddi

ಬೆಂಗಳೂರು : ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಯುವತಿಯನ್ನು ಎಸ್ಐಟಿ ಅಧಿಕಾರಿಗಳು ಸತತ 4 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿ, ಮಾಹಿತಿಯನ್ನು ಪಡೆದಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ನೋಟಿಸ್ ನೀಡಿದ ಮೇರೆಗೆ ಆಡುಗೋಡಿ ಟೆಕ್ನಿಕಲ್ ಸೆಂಟರ್ಗೆ ಯುವತಿ ಹಾಜರಾಗಿದ್ದಳು. ಎಸಿಪಿ ಕವಿತಾ ಅವರ ನೇತೃತ್ವದಲ್ಲಿ ಎಸ್‍ಐಟಿ ತಂಡ ವಿಚಾರಣೆ ನಡೆಸಿದ್ದು, ಮತ್ತೆ ವಿಚಾರಣೆಗೆ ಕರೆದರೆ ಹಾಜರಾಗಬೇಕೆಂದು ಯುವತಿಗೆ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ವಿಚಾರಣೆ ಬಳಿಕ ಯುವತಿಯನ್ನು ಬಿಗಿ ಭದ್ರತೆಯಲ್ಲಿ ಎಸ್ಐಟಿ ತಂಡವು ಗೌಪ್ಯ ಸ್ಥಳಕ್ಕೆ ಕರೆದೊಯ್ದಿದೆ ಎಂದು ತಿಳಿದುಬಂದಿದೆ.