ಬೆಂಗಳೂರು : ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಜ್ಞಾತ ಸ್ಥಳದಲ್ಲಿರುವ ಸಿಡಿ ಯುವತಿ ಇಂದು ಮತ್ತೊಂದು ವೀಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸುತ್ತೇನೆಂದು ವೀಡಿಯೋದಲ್ಲಿ ಹೇಳಿಕೆ ನೀಡಿದ್ದಾಳೆ.
ನಾನು 24 ದಿನದಿಂದ ಜೀವ ಭಯದಲ್ಲಿ ಬದುಕ್ತಾ ಇದ್ದೆ. ಆದರೆ ಎಲ್ಲಾ ಪಕ್ಷದ ನಾಯಕರು ಹಾಗೂ ಎಲ್ಲಾ ಸಂಘಟನೆಯವರಿಂದ ನನಗೆ ಬೆಂಬಲ ಸಿಗುತ್ತಿರುವುದರಿಂದ ನನಗೆ ಧೈರ್ಯ ಬಂದಿದೆ. ನನಗೆ ಧೈರ್ಯ ಬಂದಿರುವುದರಿಂದ ಇಂದು ನಾನು ನನ್ನ ವಕೀಲರಾದ ಜಗದೀಶ್ ಅವರ ಮೂಲಕ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ಸಿಡಿ ಯುವತಿ ಹೇಳಿಕೆ ನೀಡಿದ್ದಾಳೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಯುವತಿ ಎರಡನೇ ವೀಡಿಯೋ ಬಿಡುಗಡೆ ಮಾಡಿದ್ದು, ನನಗೆ ನನ್ನ ತಂದೆ-ತಾಯಿಯ ಸುರಕ್ಷತೆಯೇ ಮುಖ್ಯ. ನನ್ನ ತಂದೆತಾಯಿಗೆ ನಾನು ತಪ್ಪು ಮಾಡಿಲ್ಲ ಎಂಬುದು ಗೊತ್ತಿದೆ. ನನ್ನ ತಂದೆತಾಯಿ ಸುರಕ್ಷತವಾಗಿದ್ದಾರೆ ಎಂಬುದು ಖಾತ್ರಿಯಾದ ಬಳಿಕವೇ ನಾನು ಎಸ್‍ಐಟಿ ಮುಂದೆ ಹಾಜರಾಗಿ ಹೇಳಿಕೆ ನೀಡುತ್ತೇನೆ ಎಂದಿದ್ದರು.










