ಬೆಂಗಳೂರು : ಸಿದ್ದರಾಮಯ್ಯ ಅವರನ್ನು ಶೀಘ್ರವೇ ಬಿಜೆಪಿಗೆ ಕರೆ ತರುತ್ತೇವೆ ಎಂದು ಬಿಜೆಪಿ ಶಾಸಕ ರಾಜುಗೌಡ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಕಾಂಗ್ರೆಸ್ ನವರೇ ನಮ್ಮ ಪಕ್ಷಕ್ಕೆ ಬರುವುದಾಗಿ ಕೇಳುತ್ತಿದ್ದಾರೆ. ಆದರೆ ಇಲ್ಲಿ ಇರುವವರಿಗೇ ಅವಕಾಶ ಸಿಗುತ್ತಿಲ್ಲ. ಆದರೂ ಸಿದ್ದರಾಮಯ್ಯರನ್ನು ಬಿಜೆಪಿಗೆ ಕರೆತರಲು ಶತಪ್ರಯತ್ನ ಮಾಡುತ್ತಿದ್ದೇನೆ. ಈ ಪ್ರಯತ್ನದಲ್ಲಿ ಯಶಸ್ವಿಯಾಗುವ ವಿಶ್ವಾಸ ಇದೆ ಎಂದು ರಾಜುಗೌಡ ನಕ್ಕಿದ್ದಾರೆ.
ಆಪರೇಷನ್ ಕಾಂಗ್ರೆಸ್ ಬಗ್ಗೆ ಬಿಎಸ್ ವೈ ಪ್ರಸ್ತಾಪ ವಿಚಾರದ ಕುರಿತೂ ಪ್ರಸ್ತಾಪಿಸಿದ ಅವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿರೋಧ ಪಕ್ಷದವರನ್ನು ಯಾರು ನಿರ್ಲಕ್ಷ್ಯ ಮಾಡಬೇಡಿ. ಒಳ್ಳೆಯ ರೀತಿ ಕೆಲಸವನ್ನು ಮಾಡಬೇಕು. ಮೋದಿ, ಮೋದಿ ಎನ್ನಲು ಹೋಗಬೇಡಿ ನಿಮ್ಮ ಕೆಲಸವನ್ನು ಮಾಡಿ ಎಂದರು ಹೇಳಿದ್ದಾರೆ ಎಂದಿದ್ದಾರೆ.










