ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ, ಚಳಿಗಾಲ ಅಧಿವೇಶನ ಬಗ್ಗೆ ಚರ್ಚೆ.

35

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ. ವಿಧಾನಸೌಧದಲ್ಲಿ ಇಂದು ಬೆಳಿಗ್ಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಚಳಿಗಾಲದ ಅಧಿವೇಶನದ ವೇಳಾಪಟ್ಟಿ ಅಂತಿಮಗೊಳಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ರಾಜ್ಯದ ಗಣಿಗಾರಿಕೆ ವಲಯದಲ್ಲಿನ ಭ್ರಷ್ಟಾಚಾರ ಮತ್ತು ಅವ್ಯವಹಾರಗಳನ್ನು ಬೇರುಸಹಿತ ಕಿತ್ತೊಗೆಯಲು ಲೋಕಾಯುಕ್ತದ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸುವ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಈ ಬಾರಿಯ ಚಳಿಗಾಲ ಅಧಿವೇಶನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಸಂಪುಟವು ಡಿಸೆಂಬರ್ 9-20 ಅಥವಾ ಡಿಸೆಂಬರ್ 16-28 ರಂದು ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆಗಳಿವೆ. ಕೋವಿಡ್ ಉಪಕರಣಗಳ ಭ್ರಷ್ಟಾಚಾರ ಹಗರಣ ಕುರಿತು ಮೈಕೆಲ್ ಡಿ ಕುನ್ಹಾ ಆಯೋಗದ ವರದಿ, ಹವಾಮಾನ ಪ್ರೇರಿತ ನಷ್ಟದಿಂದ ರೈತರನ್ನು ರಕ್ಷಿಸಲುಹವಾಮಾನ ಪ್ರೇರಿತ ನಷ್ಟದಿಂದ ರೈತರನ್ನು ರಕ್ಷಿಸಲು ಬೆಳೆ ವಿಮಾ ಯೋಜನೆ, ಆರೋಗ್ಯ ಮೂಲಸೌಕರ್ಯವನ್ನು ನವೀಕರಿಸಲು 140 ಕೋಟಿ ರೂಪಾಯಿ ಹೂಡಿಕೆಗೆ ಒಪ್ಪಿಗೆ. ಏಳು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಕ್ರಿಟಿಕಲ್ ಕೇರ್ ಘಟಕಗಳನ್ನು ಅಳವಡಿಸುವುವುದು ಹಾಗೂ ರಾಮನಗರದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆಗೆ 160 ಕೋಟಿ ರೂ. ನೀಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.