ಸಿದ್ದರಾಮಯ್ಯ ಅವರಿಗೆ ನಾಡಿನ ಜನತೆಯೇ ಗೃಹ ಬಂಧನದ ಶಿಕ್ಷೆ ನೀಡಿದ್ದಾರೆ. : ಸೊಗಡು ಶಿವಣ್ಣ.

250
firstsuddi

ತುಮಕೂರು : ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದಷ್ಟೇ ಅಲ್ಲ ನಾಡಿನ ಜನತೆಯ ಕ್ಷಮೆ ಕೇಳಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮಾತೆತ್ತಿದರೆ ಸಾಕು ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಬಂದವರು ಎಂದು ಪದೇ ಪದೇ ಟೀಕೆ ಮಾಡುತ್ತಿದ್ದರು. ಇವರೇ ಷಡ್ಯಂತ್ರ ರೂಪಿಸಿ ಜೈಲಿಗೆ ಕಳುಹಿಸಿ ಬಳಿಕ ಯಡಿಯೂರಪ್ಪ ಅವರನ್ನು ಟೀಕೆ ಮಾಡುತ್ತಿದ್ದರು. ಯಡಿಯೂರಪ್ಪ ಅವರಿಗೆ ಮಾಡಿದ ಅವಮಾನಕ್ಕೆ ಸಿದ್ದರಾಮಯ್ಯ ಅವರಿಗೆ ನಾಡಿನ ಜನತೆಯೇ ತಕ್ಕ ಶಿಕ್ಷೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಹೋಗಬೇಕು ಎಂದು ನಾಡಿನ ಜನತೆ ಯಡಿಯೂರಪ್ಪ ಅವರ ಪರ ತೀರ್ಪನ್ನು ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದರ ಜೊತೆಗೆ ನಾಡಿನ ಜನತೆಯ ಕ್ಷಮೆ ಕೇಳಬೇಕು. ಇನ್ನೂ ಮೂರುವರೆ ವರ್ಷ ಮುಖ ತೋರಿಸದಂತೆ ಗೃಹ ಬಂಧನದಲ್ಲಿ ಇರುವಂತೆ ನಾಡಿನ ಜನತೆ ಸಿದ್ದರಾಮಯ್ಯ ಅವರಿಗೆ ಶಿಕ್ಷೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ದಬ್ಬಾಳಿಕೆ ಕಾಂಗ್ರೆಸ್ ನಾಯಕರ ಮೇಲೂ ನಡೆದಿದೆ. ಹೀಗಾಗಿ ಕಾಂಗ್ರೆಸ್‍ನ ಹಿರಿಯ ನಾಯಕರೆಲ್ಲರೂ ಸಿದ್ದರಾಮಯ್ಯ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದಕ್ಕೆಲ್ಲಾ ಸಿದ್ದರಾಮಯ್ಯ ಅವರ ದುರಹಂಕಾರವೇ ಕಾರಣ ಎಂದು ಕಿಡಿಕಾರಿದರು.