ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಧ್ಯಕ್ಷ ಹೆಚ್. ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಎಂದು ಕೆಲವು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ ಆದರೆ ಅವರು ಹಾಗೆ ಹೇಳುವುದು ಸರಿಯಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲು ಅವಕಾಶ ಇಲ್ಲ. ಮೈತ್ರಿ ಸರ್ಕಾರ ಬಿದ್ದು ಹೋದರೆ ಏನು ಮಾಡಲು ಆಗುತ್ತದೆ. ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿ ಹೆಚ್. ಡಿ. ಕುಮಾರಸ್ವಾಮಿ ಅವರು ಇರುವುದರಿಂದ ಸಿಎಂ ಸ್ಥಾನದ ಬಗ್ಗೆ ಮಾತಾಡುವುದು ಸರಿಯಲ್ಲ. ಲೋಕಸಭೆಯಲ್ಲಿ ಮಾತ್ರ ಜೆಡಿಎಸ್ ಪಕ್ಷ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.










