ಸಿದ್ದರಾಮಯ್ಯ ಅವರ ಸೂಚನೆಯಂತೆ ನಾವು ದೂರ ಉಳಿದಿದ್ದೇವೆ : ಶಿವರಾಮ್ ಹೆಬ್ಬಾರ್…

268
firstsuddi

ಕಾರವಾರ : ಮೈತ್ರಿ ಸರ್ಕಾರದಿಂದ ಬೇಸತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಯಾವಾ ಬಿಜೆಪಿ ನಾಯಕರ ಸಂಪರ್ಕದಲ್ಲಿ ಇಲ್ಲ. ರಾಜ್ಯದಲ್ಲಿ ಆಗುತ್ತಿರುವ ಬಿಜೆಪಿಯ ಬೆಳವಣಿಗೆಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಕೇವಲ ನಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ನಾವು ಇನ್ನೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇವೆ. ನಮಗೆ ಎಂದಿಗೂ ಸಿದ್ದರಾಮಯ್ಯ ಅವರೇ ನಾಯಕರೂ, ಅವರೇ ನಮ್ಮನ್ನು ದೂರ ಇರಿ ಎಂದು ಹೇಳಿದ್ದಾರೆ. ಹೀಗಾಗಿ ನಾವು ಸಿದ್ದರಾಮಯ್ಯ ಅವರ ಮಾತಿನಂತೆ ನಡೆದುಕೊಂಡಿದ್ದೇವೆ. ನಾವು ಸಲ್ಲಿಸಿರುವ ರಾಜೀನಾಮೆ ಅಂಗೀಕಾರ ಆದ ಬಳಿಕ ಎಲ್ಲಾ ಶಾಸಕರು ಸೇರಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.