ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ; ಭವಿಷ್ಯ ನುಡಿದ ಆದಿನಾಡು ಚಿಕ್ಕಮ್ಮ ದೇವಿ.

52
firstsuddi

ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಈಗಾಗಲೇ ಕೋಲಾರ ಕ್ಷೇತ್ರದಿಂದ ಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಬೇರೆ ಬೇರೆ ಕ್ಷೇತ್ರಗಳ ಅಭಿಮಾನಿಗಳು ನಮ್ಮ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ದುಂಬಾಲು ಬಿದ್ದಿದ್ದಾರೆ. ಈ ನಡುವೆ
ಸಿದ್ದರಾಮಯ್ಯ ಒಂದೇ ಕಡೆ ನಿಂತ್ರೆ ಬಲವಿಲ್ಲ. ಎರಡು ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ ಆದಿನಾಡು ಚಿಕ್ಕಮ್ಮ ದೇವಿ ಭವಿಷ್ಯ ನುಡಿದಿದ್ದಾಳೆ.

ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ ಸಿದ್ಧರಾಮಯ್ಯ ಕಳೆದ ವಾರ ಮಂಡ್ಯ ಜಿಲ್ಲೆಯ ಮಳವಳ್ಳಿಯ ಚೊಟ್ಟನಹಳ್ಳಿ ದೇವಾಲಯಕ್ಕೆ ತೆರಳಿದ್ದರು. ಯತೀಂದ್ರ ಸಿದ್ದರಾಮಯ್ಯ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದರು. ಈ ವೇಳೆ ಪೂಜಾರಿ ಮೈ ಮೇಲೆ ಬಂದ ಆದಿನಾಡು ಚಿಕ್ಕಮ್ಮ ದೇವಿ ನಿಮಗೆ ಪ್ರಬಲ ಶಕ್ತಿಗಳ ವಿರೋಧ ಇದೆ. ಒಂದು ಕಡೆ ಬಾಹುಬಲ ಚಾಚಿದ್ರೆ ಆಗಲ್ಲ. ಅರ್ಥ ಆಯ್ತೇನಪ್ಪ. ಬಾಹುಬಲ ಎರಡು ಕಡೆ ಚಾಚಬೇಕು. ಒಂದು ಕಡೆ ಚಾಚಿದ್ರೆ ತಪ್ಪಾಗುತ್ತೆ, ಅರ್ಥ ಮಾಡ್ಕೊಳ್ಳಿ. ಎರಡು ಕಡೆ ಚಾಚಿದ್ರೆ ನಾನು ಗೆಲ್ಲಿಸಿಕೊಂಡು ಬರ್ತೀನಿ ಎಂದು ದೇವರು ಸಂದೇಶಕೊಟ್ಟಿದೆ. ಮೂಲ ಮನೆ ದೇವರ ಸೂಚನೆಯಂತೆ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ನಿಲ್ತಾರಾ ಎಂಬುದು ಕಾದುನೋಡಬೇಕಿದೆ.