ಸಿಬಿಐ, ಇಡಿ ಅಧಿಕಾರಾವಧಿ ಐದು ವರ್ಷಗಳವರೆಗೆ ವಿಸ್ತರಣೆ…

66
firstsuddi

ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರ ಐದು ವರ್ಷಗಳವರೆಗೆ ವಿಸ್ತರಿಸಿದೆ.

ಕೇಂದ್ರೀಯ ಸಂಸ್ಥೆಗಳ ಮುಖ್ಯಸ್ಥರ ಅಧಿಕಾರ ಅವಧಿಯನ್ನು ಎರಡು ವರ್ಷಗಳಿಂದ ಐದು ವರ್ಷಗಳಿಗೆ ವಿಸ್ತರಿಸಿದ್ದು, ಎರಡೂ ಸುಗ್ರೀವಾಜ್ಞೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ.

ಈ ಸುಗ್ರೀವಾಜ್ಞೆಯ ಪ್ರಕಾರ, ಎರಡೂ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ, ತಮ್ಮ ಅಧಿಕಾರವನ್ನು ಮೂರು ವರ್ಷಗಳ ಕಾಲ ಪ್ರತಿವರ್ಷ ವಿಸ್ತರಿಸಬಹುದಾಗಿದೆ. ಅದೇ ರೀತಿ ಮೊದಲು ನೇಮಕಾತಿ ಆದೇಶ ಜಾರಿಗೆ ಬಂದ ಐದು ವರ್ಷಗಳ ನಂತರ ಇಂಥ ಯಾವುದೇ ವಿಸ್ತರಣೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸುಗ್ರೀವಾಜ್ಞೆಯಲ್ಲಿ ಸ್ಪಷ್ಟಪಡಿಸಲಾಗಿದೆ.