ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸ್ ರಿವಾಲ್ವರ್-ಕೊಲೆ ಆರೋಪಿ ಕಾಲಿಗೆ ಗುಂಡೇಟು…

151
firstsuddi

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ರಿವಾಲ್ವರ್ ಸದ್ದು ಮಾಡಿದ್ದು, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಡಿ.ಜೆ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯೂನೀಸ್ ಎಂಬ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ರೌಡಿಶೀಟರ್ ಭಟ್ಟಿ ಅಮ್ಜಾದ್ ಎಂಬುವವರನ್ನು ನಡುರಸ್ತೆಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿದಂತೆ ಆರೋಪಿ ಯೂನೀಸ್ ಸೇರಿದಂತೆ ಒಟ್ಟು 11 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇಂದು ಬೆಳಿಗ್ಗೆ ಕೃತ್ಯಕ್ಕೆ ಬಳಸಲಾಗಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿಯಾದ ಯೂನೀಸ್ ಅವರು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು, ಆತ್ಮರಕ್ಷಣೆಗಾಗಿ ಡಿ.ಜೆ. ಹಳ್ಳಿ ಠಾಣೆಯ ಇನ್ಸ್ ಪೆಕ್ಟರ್ ಕೇಶವಮೂರ್ತಿ ಅವರು ಆರೋಪಿ ಕಾಲಿಗೆ ಗುಂಡನ್ನು ಹಾರಿಸಿದ್ದು, ಸದ್ಯ ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.