ನವದೆಹಲಿ : ದೇಶದಾದ್ಯಂತ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಸುಪ್ರೀಂಕೋರ್ಟ್ ನ ಶೇ.50ರಷ್ಟು ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇಂದಿನ ವಿಚಾರಣೆಗಳನ್ನು ನ್ಯಾಯಾಧೀಶರು ತಮ್ಮ ನಿವಾಸದಲ್ಲಿ ಕುಳಿತು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಿದ್ದು, ಮುಂದಿನ ಕೋರ್ಟ್ ಕಲಾಪಗಳು ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ ಎನ್ನಲಾಗಿದೆ.










