ಸೆಪ್ಟೆಂಬರ್ 20ರೊಳಗೆ ಸಿಇಟಿ ಫಲಿತಾಂಶ ಪ್ರಕಟ : ಅಶ್ವಥ್ ನಾರಾಯಣ್.

81
firstsuddi

ಬೆಂಗಳೂರು : ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಯುತ್ತಿದ್ದು, ಸೆಪ್ಟೆಂಬರ್ 20ರೊಳಗೆ ಸಿಇಟಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ.

ನಗರದ ಶೇಷಾದ್ರಿಪುರಂ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಾದ್ಯಂತ  ಸಿಇಟಿ ಪರೀಕ್ಷೆ ನಡೆಯುತ್ತಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗಿದ್ದು, ಕೋವಿಡ್ ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಪಾಸಿಟಿವ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೇಂದ್ರದ ವ್ಯವಸ್ಥೆ ಮಾಡಲಾಗಿದ್ದು, ಈ ತಿಂಗಳ 30ಕ್ಕೆ ಪರೀಕ್ಷೆ ಮುಗಿಯುತ್ತದೆ. ಸೆಪ್ಟೆಂಬರ್ 20ರೊಳಗೆ ಸಿಇಟಿ ಫಲಿತಾಂಶ ಪ್ರಕಟಿಸಲಾಗುವುದು, ಅಕ್ಟೋಬರ್ ವೇಳೆಗೆ ಕೌನ್ಸಿಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.