ಸೆಮಿಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ.ಸಿಂಧು.

166
firstsuddi

ಟೋಕಿಯೋ : ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಪೈನಲ್ ಪಂದ್ಯದಲ್ಲಿ ಭಾರತದ ಪಿ.ವಿ ಸಿಂಧು ಗೆಲುವು ದಾಖಲು ಮಾಡಿದ್ದು, ಈ ಮೂಲಕ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.

ಇಂದು ನಡೆದ ಕ್ವಾರ್ಟರ್ ಫೈನಲ್ ನಲ್ಲಿ ಜಪಾನ್ ನ ಅಕಾನೆ ಯಮಗೂಚಿ ವಿರುದ್ಧ 21-13, 22-20 ಅಂಕಗಳೊಂದಿಗೆ ಸಿಂಧು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸತತವಾಗಿ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್ ಪ್ರವೇಶ ಪಡೆದಿದ್ದಾರೆ.