ಸೇನಾ ಹೆಲಿಕಾಪ್ಟರ್ ಪತನ – ಓರ್ವ ಪೈಲಟ್ ಸಾವು…

38
firstsuddi

ಶ್ರೀನಗರ : ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್ ಕಣಿವೆಯ ತುಲೈಲ್ ಕ್ವಾರ್ಟರ್‌ನಲ್ಲಿರುವ ಗುಜ್ರಾನ್ ನಲ್ಲಾ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ಒಬ್ಬರು ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬ ಪೈಲಟ್ ಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗಡಿ ಭದ್ರತಾ ಪಡೆ ಸಿಬ್ಬಂದಿ ಕೆಲವರು ಅಸ್ವಸ್ಥಗೊಂಡಿದ್ದರು. ಅವರನ್ನು ಕರೆದುಕೊಂಡು ಬರುವ ಸಲುವಾಗಿ ಈ ಹೆಲಿಕಾಪ್ಟರ್ ಹೊರಟಿತ್ತು. ಆದರೆ ಗುರೆಜ್ ವಲಯದ ಗುರ್ಜನ್ ನಲ್ಲಾ ಬಳಿ ಪತನಗೊಂಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.