ಇಟಾನಗರ : ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಓರ್ವ ಪೈಲಟ್ ಸಾವನ್ನಪ್ಪಿದ್ದಾರೆ.
ತವಾಂಗ್ ಬಳಿಯ ಪ್ರದೇಶದಲ್ಲಿ ಹಾರುತ್ತಿದ್ದ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದಿನನಿತ್ಯದ ವಿಹಾರದ ವೇಳೆ ಪತನಗೊಂಡಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರೂ ಪೈಲಟ್ ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಪೈಲಟ್ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಪೈಲಟ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ.










