ಸೋಂಕಿತರ ಸಾವಿಗೆ ಮೋದಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ : ರಾಹುಲ್ ಗಾಂಧಿ.

108
firstsuddi

ನವದೆಹಲಿ : ಸೋಂಕಿತರ ಸಾವಿಗೆ ಮೋದಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೊರೊನಾ ವೈರಸ್ ಸೋಂಕಿನಿಂದಾಗಿ ಮನುಷ್ಯನ ದೇಹದಲ್ಲಿ ಆಮ್ಲಜನಕದ ಕೊರತೆ ಮಾತ್ರ ಉಂಟಾಗುತ್ತದೆ. ಆದರೆ ಮೋದಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ದೇಶದಲ್ಲಿ ರೋಗಿಗಳಿಗೆ ಅನಿವಾರ್ಯವಾಗಿ ಬೇಕಾದ ಆಮ್ಲಜನಕದ ಸಿಲಿಂಡರ್ ಗಳು ಮತ್ತು ಐಸಿಯು ಬೆಡ್ ಕೊರತೆಯುಂಟಾಗಿದೆ. ಮೋದಿ ನಿರ್ಲಕ್ಷ್ಯದಿಂದಾಗಿ ಸಾವಿರಾರು ಸೋಂಕಿತರು ನಿತ್ಯ ಸಾವನ್ನಪ್ಪುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.