ಸೋಪೋರ್‍ನಲ್ಲಿ ಉಗ್ರರ ಅಟ್ಟಹಾಸ-ಓರ್ವ ನಾಗರೀಕ ಹಾಗೂ ಓರ್ವ ಸಿ.ಆರ್.ಪಿ.ಎಫ್ ಯೋಧ ಹುತಾತ್ಮ…

108
firstsuddi

ಶ್ರೀನಗರ : ಗಡಿಯಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ನಾಗರೀಕ ಹಾಗೂ ಓರ್ವ ಸಿ.ಆರ್.ಪಿ.ಎಫ್ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ಸೋಪೋರ್‍ನಲ್ಲಿ ಯೋಧರು ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ ಹಾಗೂ ಓರ್ವ ನಾಗರೀಕ ಬಲಿಯಾಗಿದ್ದು, ದಾಳಿಯಲ್ಲಿ ಮತ್ತಿಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಗ್ರರು ದಾಳಿ ನಡೆಸಿದ ಸ್ಥಳದಲ್ಲಿ ಯೋಧರು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.