ಕೋಲ್ಕತಾ: ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಸದ್ಯ ಅವರನ್ನು ಕೋಲ್ಕತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೂಲಿ ಅವರಿಗೆ ಕೋವಿಡ್ ವೈರಸ್ ನ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ವರದಿ ಬಂದಿದ್ದು ವರದಿ ಪಾಸಿಟಿವ್ ಕಂಡುಬಂದಿದೆ. ಎರಡನೇ ಬಾರಿಗೆ ಗಂಗೂಲಿಗೆ ಕೊರೊನಾ ಸೋಂಕು ತಗುಲಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.










