ಸ್ಕೂಟರ್ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ…

530
firstsuddi

ಮೈಸೂರು : ಸ್ಕೂಟರ್ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕಡಕೊಳ ಬಳಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದ ನಿವಾಸಿ ಕೃಷ್ಣ(22) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ತೆರಳಿದ ಯುವಕ ಮನೆಗೆ ವಾಪಾಸ್ಸಾಗಿರಲಿಲ್ಲ. ಆದರೆ ಇಂದು ಯುವಕನ ಶವ ಪತ್ತೆಯಾಗಿದ್ದು, ಮೃತದೇಹ ಪತ್ತೆಯಾಗಿರುವ ಸ್ಥಳದಿಂದ ಒಂದು ಕಿ.ಮೀ ದೂರ ಸ್ಕೂಟರ್ ಎಳೆದು ತಂದಿರುವ ಗುರುತು ಪತ್ತೆಯಾಗಿದ್ದು, ಹೀಗಾಗಿ ಯಾರೋ ಕೊಲೆ ಮಾಡಿ ಕಡಕೊಳ ಬಳಿ ತಂದು ಹಾಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಹಾಗೂ ಮೈಸೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.