ಸ್ನೇಹಿತರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ…

79
firstsuddi

ಬೆಂಗಳೂರು : ಸ್ನೇಹಿತರ ನಡುವೆ ಗಲಾಟೆ ನಡೆದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ನಗರದ ಜೈನ್ ಆಸ್ಪತ್ರೆ ಹಿಂಭಾಗದ ಅವಲಹಳ್ಳಿ ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ 9.30 ಗಂಟೆ ಸುಮಾರಿಗೆ ನಡೆದಿದೆ.

ಚಂದ್ರಶೇಖರ್ (30) ಎಂಬಾತ ಹತ್ಯೆಯಾದ ವ್ಯಕ್ತಿ. ಹಣಕಾಸಿನ ವಿಚಾರಕ್ಕೆ ಚಂದ್ರಶೇಖರ್ ಹಾಗೂ ಸ್ನೇಹಿತರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಚಾಕುವಿನಿಂದ ಇರಿದು, ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.

ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.