ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಆರ್. ರಮೇಶ್ ಕುಮಾರ್…

292
firstsuddi

ಬೆಂಗಳೂರು : ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಧ್ವನಿ ಮತದ ಮೂಲಕ ವಿಶ್ವಾಸ ಮತ ಸಾಬೀತುಪಡಿಸಿದ ಬಳಿಕ ಧನ ವಿನಿಯೋಗ ವಿಧೇಯಕವನ್ನು ಮಂಡಿಸಿದರು. ಯಾವುದೇ ಚರ್ಚೆಯಿಲ್ಲದೇ ಧನ ವಿನಿಯೋಗ ವಿಧೇಯಕ ಅಂಗೀಕಾರವಾಗಿದ್ದು, ಬಳಿಕ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಸ್ತಾಪಿಸಿದರು. ನಾನು ಸ್ಪೀಕರ್ ಆಯ್ಕೆಯಾದಗಿನಿಂದ ಇಲ್ಲಿಯವರೆಗೂ ಈ ಸ್ಥಾನದ ಗೌರವ ಕಡಿಮೆಯಾಗದಂತೆ ಕೆಲಸ ಮಾಡಿದ್ದೇನೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಿಲ್‍ಪಿ ನಾಯಕ ಸಿದ್ದರಾಮಯ್ಯ ಅವರು ನೀಡಿರುವ ದೂರಿನ ಅನ್ವಯ ಸಂವಿಧಾನದ ಪ್ರಕಾರವೇ ನಾನು 17 ಶಾಸಕರನ್ನು ಅನರ್ಹತೆ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದೇನೆ ಎಂದು ಹೇಳಿ ತಮ್ಮ ರಾಜೀನಾಮೆ ಪತ್ರವನ್ನು ಡೆಪ್ಯುಟಿ ಸ್ಪೀಕರ್ ಕೃಷ್ಣಾರೆಡ್ಡಿ ಅವರಿಗೆ ಸಲ್ಲಿಸಿದರು.