ಸ್ಯಾಂಟ್ರೋ ರವಿ ಆಸ್ಪತ್ರೆಗೆ ದಾಖಲು…

25
firstsuddi

ಬೆಂಗಳೂರು : ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದ ಮುಖ್ಯ ಆರೋಪಿ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ನಿನ್ನೆ ಸಂಜೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

ಸ್ಯಾಂಟ್ರೋ ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆ ಬಳಿ ಭದ್ರತೆ ಹೆಚ್ಚಿಸಿದ್ದಾರೆ. ಭದ್ರತೆಗೆ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಸ್ಯಾಂಟ್ರೋ ರವಿಯನ್ನು ಜನವರಿ 30ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿತ್ತು.