ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ ರಾಜ್ಯ ಸರ್ಕಾರ.

63
firstsuddi

ಬೆಂಗಳೂರು : ಸ್ಯಾಂಟ್ರೋ ರವಿ ಪ್ರಕರಣಗಳನ್ನ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಸ್ಯಾಂಟ್ರೊ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಮೈಸೂರಿನ ವಿಜಯನಗರ ಠಾಣೆಯಲ್ಲಿ ದಾಖಲಾಗಿದ್ದ ಮೂರು ಪ್ರಕರಣ, ಕಾಟನ್ ಪೇಟೆ ಠಾಣೆಯಲ್ಲಿ ದಾಖಲಾಗಿದ್ದ ಫೇಕ್ ಕೇಸ್, ರವಿ ಪತ್ನಿ ದಾಖಲಿಸಿದ್ದ ಪ್ರಕರಣದ ವರ್ಗಾವಣೆ ಮತ್ತು ವೇಶ್ಯಾವಾಟಿಕೆ ದಂಧೆ ಪ್ರಕರಣಗಳೂ ಸೇರಿದಂತೆ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಸ್ಯಾಂಟ್ರೋ ರವಿಯನ್ನ ಜನವರಿ 25ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ವಿಚಾರಣೆ ವೇಳೆ ಕೋರ್ಟ್‌ನಲ್ಲಿ ಸರ್ಕಾರಿ ವಕೀಲರು ಪ್ರಕರಣವನ್ನು ಸಿಐಡಿಗೆ ವಹಿಸಲು ಮನವಿ ಮಾಡಿದರು. ಆಗ ಕೋರ್ಟ್ ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ಸಿಐಡಿಗೆ ವಹಿಸುವುದು ಸರ್ಕಾರದ ಕೆಲಸ, ಸೂಕ್ತ ದಾಖಲಾತಿಗಳ ಜೊತೆ ಅರ್ಜಿ ಸಲ್ಲಿಕೆ ಮಾಡಿ ಎಂದು ಸೂಚನೆ ನೀಡಿತು. ಈ ಬೆಳವಣಿಗೆ ಬೆನ್ನಲ್ಲೇ ಕರ್ನಾಟಕ ಗೃಹ ಸಚಿನವಾಲಯ ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.