ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ-ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಸಿಸಿಬಿ ನೊಟೀಸ್…

178
firstsuddi

ಬೆಂಗಳೂರು : ಈ ನಡುವೆ ಬಾರಿ ಸದ್ದು ಮಾಡುತ್ತಿರುವ ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟಿನ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಸಿಸಿಬಿ ಇಂದ್ರಜಿತ್ ಲಂಕೇಶ್ ಅವರಿಗೆ ನೊಟೀಸ್ ಜಾರಿ ಮಾಡಿದೆ. ಈ ಹಿಂದೆ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್‍ವುಡ್ ನಟಿಯರಿಗೆ ಡ್ರಗ್ಸ್ ಜಾಲದ ನಂಟು ಇರುವ ಬಗ್ಗೆ ನನಗೆ ಮಾಹಿತಿ ತಿಳಿದಿದೆ ಎಂದು ಹೇಳಿದ್ದರು. ಅಲ್ಲದೇ ಇತ್ತೀಚೆಗೆ ಮೃತಪಟ್ಟ ಯುವ ನಟನ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿದ್ದರೆ ಡ್ರಗ್ಸ್ ಜಾಲದ ನಂಟಿನ ಬಗ್ಗೆ ಮಾಹಿತಿ ಬಹಿರಂಗವಾಗುತ್ತಿತ್ತು ಎಂದು ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಿಸಿಬಿಯ ಮಾದಕವಸ್ತು ನಿಗ್ರಹ ದಳದಿಂದ ಡ್ರಗ್ಸ್ ಜಾಲದ ಬಗ್ಗೆ ಇಂದ್ರಜಿತ್ ಲಂಕೇಶ್ ಅವರ ಬಳಿ ಇರುವ ಮಾಹಿತಿಯನ್ನು ಸಿಸಿಬಿಯೊಂದಿಗೆ ಹಂಚಿಕೊಳ್ಳಬಹುದು ಎಂದು ನೊಟೀಸ್ ನೀಡಲಾಗಿದೆ.