ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯ-ವಿಚಾರಣೆಗೆ ಬರಲು ಸಾಧ್ಯವಿಲ್ಲ ಎಂದ ನಟಿ ರಾಗಿಣಿ ಅವರಿಗೆ ಸಿಸಿಬಿಯಿಂದ ಮತ್ತೊಂದು ನೋಟಿಸ್…

142
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಹಾಗೂ ನಟಿ ಸಂಜನಾ ಗಲ್ರಾನಿ ಅವರಿಗೆ ನೊಟೀಸ್ ಜಾರಿ ಮಾಡಿದ್ದರು. ಅಲ್ಲದೇ ನಟಿ ರಾಗಿಣಿ ಅವರ ಆಪ್ತ ರವಿಶಂಕರ್ ಹಾಗೂ ಸಂಜನಾ ಗಲ್ರಾನಿ ಅವರ ಆಪ್ತ ರಾಹುಲ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಸಿಸಿಬಿ ಪೊಲೀಸರು ನೊಟೀಸ್ ನೀಡುತ್ತಿದ್ದಂತೆ ನಟಿ ರಾಗಿಣಿ ದ್ವಿವೇದಿ ಅವರು ತಮ್ಮ ವಕೀಲರನ್ನು ಭೇಟಿಯಾಗಿ ಬಳಿಕ ಇಂದು ನನಗೆ ವಿಚಾರಣೆಗೆ ಹಾಜರಾಗಲು ಆಗುವುದಿಲ್ಲ. ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಟ್ವೀಟ್ ಮಾಡಿ ತಿಳಿಸಿದ್ದರು. ಆದರೆ ಸಿಸಿಬಿ ಪೊಲೀಸರು ನಟಿ ರಾಗಿಣಿ ಅವರಿಗೆ ಟಕ್ಕರ್ ನೀಡಿದ್ದು, ನಾಳೆಯೇ ವಿಚಾರಣೆಗೆ ಹಾಜರಾಗಬೇಕು ಎಂದು ಮತ್ತೊಂದು ನೊಟೀಸ್ ನೀಡಲು ಮುಂದಾಗಿದ್ದು, ಒಂದು ವೇಳೆ ರಾಗಿಣಿ ಅವರು ವಿಚಾರಣೆಗೆ ಹೋಗದಿದ್ದರೆ ಸಿಸಿಬಿ ಮುಂದಿನ ಕಾನೂನು ಕ್ರಮಕ್ಕೆ ಮುಂದಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.